ದೇಶದಲ್ಲಿ ಅರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟು ಹೋಗಿದೆ: ರಾಜೇಗೌಡ

ನ್ಯೂಸ್ ಕೊಪ್ಪ, ಸೆ.22: ದೇಶದಲ್ಲಿ ಅರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟು ಹೋಗಿದೆ. ಕೆಲ ಇಲಾಖೆಗಳಲ್ಲಿ ಅಧಿಕಾರಿಗಳಿಗೆ ಸಂಬಳವನ್ನು ನೀಡದಂತಹ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಸ ಉದ್ಯೋಗವನ್ನು ಪ್ರಾರಂಭಿಸಲು ಬ್ಯಾಂಕ್‌ಗಳು ಸಾಲವನ್ನು ನೀಡಲು ಹಿಂದೇಟು ಹಾಕುವಂತಹ ಸನ್ನಿವೇಶ ಎದುರಾಗಿದೆ ಎಂದು ಶಾಸಕ ರಾಜೇಗೌಡ ಹೇಳಿದರು.

ಹೊಸಕೊಪ್ಪದಲ್ಲಿರುವ ಅಸಗೋಡು ಪ್ರಾ.ಕೃ.ಪ.ಸ ಸಂಘದ ನೂತನ ಕಟ್ಟಡ ನಿರ್ಮಾಣದ ಸ್ಥಳದಲ್ಲಿ ಏರ್ಪಡಿಸಿದ್ದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಹಕಾರ ಸಂಘಗಳು ಸದೃಡವಾಗಿದ್ದರೂ ಮುಂದಿನ ದಿನಗಳಲ್ಲಿ ಬಲಗೊಳ್ಳುವ ಆಗತ್ಯವಿದೆ ಎಂದು ಶಾಸಕ ರಾಜೇಗೌಡ ಅಭಿಪ್ರಾಯ ಪಟ್ಟರು.