ಮೇಲಿನ ಪೇಟೆ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭ | ಅದ್ದೂರಿಯಾಗಿ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮ

ನ್ಯೂಸ್ ಕೊಪ್ಪ, ಜ.31: ಮೇಲಿನಪೇಟೆಯಲ್ಲಿರುವ ಆರೂರು ಲಕ್ಷ್ಮೀನಾರಾಯಣ ರಾವ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಐವತ್ತು ವರ್ಷ ಕಳೆದ ಹಿನ್ನೆಲೆಯಲ್ಲಿ ಜ.೨೫ರಂದು ಶಾಲಾ ಆವರಣದಲ್ಲಿ ಸುವರ್ಣ ಮಹೋತ್ಸವ ಸಮಾರಂಭವನ್ನು ಅದ್ದೂರಿಯಾಗಿ ನಡೆಸಲಾಗಿತ್ತು.

ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಂಗಳೂರಿನ ಕುಸಲ್ದ ಕಲಾವಿದೆರ್ ಕುಡ್ಲ ತಂಡದಿಂದ ಪುದರ್ ಬೊಡ್ಚಿ- ಊರು ಬೊಡ್ಚಿ ಎಂಬ ಹಾಸ್ಯಮಯ ತುಳು ನಾಟಕವನ್ನು ಏರ್ಪಡಿಸಲಾಗಿತ್ತು.
ಸುವರ್ಣ ಮಹೋತ್ಸವ ಕಾರ್ಯಕ್ರಮಗಳನ್ನು ಸಂಸದೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರಯ. ಆ‌‌ ದಿನ‌ ಸಂಜೆ ನಡೆದ ಕಾರ್ಯಕ್ರಮವನ್ನು ಶಾಸಕ ರಾಜೇಗೌಡ ಉದ್ಘಾಟಿಸಿದರು.