ನುಗ್ಗಿ ಗ್ರಾಮ ಪಂಚಾಯತಿಯಲ್ಲಿ ಗಣತಂತ್ರ ದಿನದ ಆಚರಣೆ

 

ನ್ಯೂಸ್ ಕೊಪ್ಪ, ಜ.26: ತಾಲೂಕಿನ ನುಗ್ಗಿ ಗ್ರಾಮ ಪಂಚಾಯತಿ ಯಲ್ಲಿ 71ನೇ ಗಣರಾಜ್ಯೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು ದ್ವಜಾರೋಹಣ ನೆರವೇರಿಸಿ ಮಾತನಾಡಿದ ಗ್ರಾಮ ಪಂಚಾಯತಿ ಅಧ್ಯಕ್ಷ ಹೆಚ್ ಆರ್ ಜಗದೀಶ್ ಮಾತನಾಡಿ ನಮ್ಮ ದೇಶಕ್ಕೆ ಸಂವಿಧಾನ ಜಾರಿಯಾದ ದಿನವಾದ ಜನವರಿ 26 ಅನ್ನು ಗಣರಾಜ್ಯೋತ್ಸವವನ್ನಾಗಿ ಹೆಮ್ಮೆಯಿಂದ ಆಚರಿಸುತ್ತೇವೆ. ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಈ ದಿನ ವರ್ಷದ ಮೊದಲ ರಾಷ್ಟ್ರೀಯ ಹಬ್ಬ ಕೂಡ ಹೌದು
ಹಿರಿಯ ಚೇತನ ಡಾ.ಬಿ ಆರ್ ಅಂಬೇಡ್ಕರ್ ರವರು ಈ ದೇಶದ ಕಟ್ಟಕಡೆಯ ಪ್ರಜೆಗೂ ಸಂವಿದಾನದ ಪ್ರಕಾರ ತಮ್ಮ ಹಕ್ಕುಗಳೊಡನೆ ಬದುಕುವ ಹಕ್ಕನ್ನು ಕೊಟ್ಟ ದಿನ ಆ ಕಾರಣ ಗಣ ರಾಜ್ಯೋತ್ಸವವನ್ನು ಗೌರವದಿಂದ ಬಹಳ ಅರ್ಥಪೂರ್ಣವಾಗಿ ಆಚರಿಸಬೇಕಾದ್ದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಈ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಶಾಲಾ-ಕಾಲೇಜು, ಕಚೇರಿಗಳಲ್ಲಿ, ವಿವಿಧ ಇಲಾಖೆಗಳಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತದೆ

ಈ ದಿನಗಳಲ್ಲಿ ದೇಶದಲ್ಲಿ ದೇಶವಿರೋಧಿ ಚಟುವಟಿಕೆಗಳೆ ಮೇಳೈಸುತ್ತಿದ್ದು ಎಲ್ಲ ಗೋಮುಖ ವ್ಯಾಘ್ರಗಳ ಮುಖವಾಡ ಕಳಚಿ ಬೀಳುತ್ತಿದೆ ಈ ಗಣರಾಜ್ಯೋತ್ಸವ ಶುಭ ದಿನದಲ್ಲಿ ನಾವೆಲ್ಲರೂ ದೇಶಪ್ರೇಮ ತುಂಬಿದ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು. ಸಾಧು ಸಂತರ, ಸ್ವಾತಂತ್ರ್ಯ ಯೋಧರ, ದೇಶ ಪ್ರೇಮಿಗಳ, ಹಿರಿಯರ ಹೋರಾಟ ಹಾಗೂ ಪರಿಶ್ರಮದಿಂದ ಕಟ್ಟಿ ಬೆಳೆಸಿರುವ ಈ ಭವ್ಯ ಭಾರತದ ಭವಿಷ್ಯವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವ ಸವಾಲುಗಳು ನಮ್ಮ ಮುಂದಿದ್ದು, ಈ ಕಾರ‍್ಯದ ಯಶಸ್ಸಿಗೆ ನಾವೆಲ್ಲರೂ ಒಟ್ಟಾಗಿ ದುಡಿಯೋಣ ಎಂದರು.

ಕಾರ್ಯಕ್ರಮದ ಅಂಗವಾಗಿ ಗ್ರಾಮದ ಪ್ರಮುಖ ರಸ್ತೆಗಳನ್ನು ಗುಡಿಸುವ ಮೂಲಕ ಸ್ವಚ್ಚತೆ ಕಾರ್ಯಕ್ರಮ ನಡೆಯಿತು ಇದರಲ್ಲಿ ಗ್ರಾಮಸ್ಥರು ಶಿಕ್ಷಕರು ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು. ಗ್ರಾಮ ಪಂಚಾಯತಿ ವತಿಯಿಂದ ಗ್ರಾಮದ 19 ವಿಕಲಚೇತನರಿಗೆ ಸೌರವಿದ್ಯುತ್ ಕಿಟ್ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪಿಡಿಒ ಪ್ರಸನ್ನ, ಮಾಜಿ ಅಧ್ಯಕ್ಷ ಸವಿನಾಥ್,ಗ್ರಾಮ ಪಂಚಾಯತಿ ಸದಸ್ಯರು ಭಾಗವಹಿಸಿದ್ದರು.

‌………..ವಿಕ್ರಮ್ ಕೊಪ್ಪ……..